Webdunia - Bharat's app for daily news and videos

Install App

ಬೆಂಗಳೂರು ಕಂಬಳಕ್ಕೆ ತಾರಾ ಮೆರುಗು: ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿಗೆ ಆಹ್ವಾನ

Webdunia
ಬುಧವಾರ, 8 ನವೆಂಬರ್ 2023 (09:10 IST)
Photo Courtesy: Twitter
ಬೆಂಗಳೂರು: ನವಂಬರ್ 25,26 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ಉತ್ಸವಕ್ಕೆ ಬಾಲಿವುಡ್ ಬೆಡಗಿ, ಕರಾವಳಿ ಚೆಲುವೆ ಐಶ್ವರ್ಯಾ ರೈ ಬಚ್ಚನ್, ಟಾಲಿವುಡ್ ತಾರೆ ಅನುಷ್ಕಾ ಶೆಟ್ಟಿ ಮುಂತಾದವರು ಆಗಮಿಸುವ ಸಾಧ‍್ಯತೆಯಿದೆ.

ಈ ಕಾರ್ಯಕ್ರಮಕ್ಕೆ ಕರಾವಳಿಗರೆಲ್ಲರೂ ಒಟ್ಟು ಸೇರುವ ನಿರೀಕ್ಷೆಯಿದೆ. ಕಂಬಳ ಎನ್ನುವುದು ವಿಶೇಷವಾಗಿ ಮಂಗಳೂರು, ದಕ್ಷಿಣ ಕನ್ನಡ ಭಾಗದಲ್ಲಿ ಜನಪ್ರಿಯವಾಗಿರುವ ಗ್ರಾಮೀಣ ಕ್ರೀಡೆ.  ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರು ಕಂಬಳ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 1 ಕೋಟಿ ರೂ. ಅನುದಾನವನ್ನೂ ನೀಡಿದ್ದಾರೆ. ಸುಮಾರು 70 ಎಕರೆ ಪ್ರದೇಶದಲ್ಲಿ ಕಾರ್ಯಕ್ರಮ ನಡೆಯಲಿದೆ. ಲಕ್ಷಾಂತರ ಮಂದಿ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ.

ಕರಾವಳಿ ಮೂಲದವರಾಗಿ ಈಗ ಬಾಲಿವುಡ್, ಟಾಲಿವುಡ್ ನಲ್ಲಿ ಮಿಂಚುತ್ತಿರುವ ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ ಸೇರಿದಂತೆ ಸೆಲೆಬ್ರಿಟಿಗಳು ಕಂಬಳಕ್ಕೆ ಬರಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments