ಹೈದರಾಬಾದ್ : ದಿವಂಗತರಾದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಭಾರತ ರತ್ನ ನೀಡಿ ಎಂದು ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಮನವಿ ಮಾಡಿದ್ದಾರೆ.
ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ತಮ್ಮ ಮಧುರ ಕಂಠದಿಮದ ಸಂಗೀತದ ಕಂಪನ್ನು ಪಸರಿಸಿದ್ದಾರೆ. ಇವರು ತಮಿಳು, ತೆಲುಗು, ಕನ್ನಡ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅಲ್ಲದೇ ಅತ್ಯುತ್ತುಮ ರಾಷ್ಟ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇಂತಹ ಗೌರವಾನ್ವಿತ ಹಾಡುಗಾರನಿಗೆ ಭಾರತದ ಶ್ರೇಷ್ಠ ಪ್ರಶಸ್ತಿ ಭಾರತ ರತ್ನ ನೀಡಿ ಗೌರವಿಸಬೇಕೆಂದು ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಪ್ರಧಾನಿ ಮೋದಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಎನ್ನಲಾಗಿದೆ.