Publish Date: Sun, 15 May 2022 (16:54 IST)
Updated Date: Sun, 15 May 2022 (16:55 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ, ನಿರ್ಮಾಪಕ ಆನೇಕಲ್ ಬಾಲರಾಜ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ವಾಕಿಂಗ್ ಹೋಗುವಾಗ ಹಿಂದಿನಿಂದ ಬಂದ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಫುಟ್ ಪಾತ್ ಮೇಲೆ ಬೀಳುವಾಗ ತಲೆಗೆ ತೀವ್ರ ಪೆಟ್ಟಾಗಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕರಿಯ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟಿದ್ದರು. ಬಳಿಕ ತಮ್ಮ ಪುತ್ರನಿ ಸಂತೋಷ್ ಗಾಗಿ ಕೆಲವು ಸಿನಿಮಾ ನಿರ್ಮಿಸಿದರು. ಇದೀಗ ಜೆ.ಪಿ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.