ಬಾಲಿವುಡ್ ನ ಮತ್ತೊಂದು ಕೊಂಡಿ ಕಳಚಿದಂತಾಗಿದೆ.
ದೃಶ್ಯಂ ಸಿನಿಮಾದಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ನಿರ್ದೇಶಕ ನಿಶಿಕಾಂತ್ ಕಾಮತ್ ಸಾವನ್ನಪ್ಪಿದ್ದಾರೆ.
ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.
ಹೈದ್ರಾಬಾದ್ ನಲ್ಲಿ ಆಸ್ಪತ್ರೆಗೆ ದಾಖಲು ಮಾಡಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ತಮ್ಮ 50 ನೇ ವರ್ಷದಲ್ಲಿ ಸಾವನ್ನಪ್ಪಿದ್ದಾರೆ.