ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದೊಂದಿಗೆ ಫೆಬ್ರವರಿ 3ರಿಂದ ಫೆಬ್ರವರಿ 9ರವರೆಗೆ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆವರೆಗೆ ನಗರದ ಗುರು ಚಿತ್ರಮಂದಿರದಲ್ಲಿ ಚಲನಚಿತ್ರ ಸಪ್ತಾಹದ ಅಂಗವಾಗಿ ಪ್ರಶಸ್ತಿ ವಿಜೇತ ಕನ್ನಡ ಚಲನಚಿತ್ರಗಳ ಉಚಿತ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಫೆ 3 ರಂದು ಮೈತ್ರಿ ಚಿತ್ರ ಪ್ರದರ್ಶನಗೊಳ್ಳಲಿದೆ. ಫೆ.4ರಂದು ಶಿವಯೋಗಿ ಶ್ರೀ ಪುಟ್ಟಜ್ಜಯ್ಯ, ಫೆ.5ರಂದು ತಿಥಿ, ಫೆ.6ರಂದು ಕೃಷ್ಣಲೀಲಾ, ಫೆ.7ರಂದು ರಂಗಿತರಂಗ, ಫೆ.8ರಂದು ತಿಥಿ ಮತ್ತು ಫೆ.9 ರಂದು ಮೈತ್ರಿ ಚಿತ್ರಗಳು ಪ್ರದರ್ಶನ ಕಾಣಲಿವೆ.
ಜಿಲ್ಲಾ ಪಂಚಾಯಿತಿ ಆದ್ಯಕ್ಷರಾದ ಶ್ವೇತಾ ದೇವರಾಜ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕರಾದ ಹೆಚ್.ಎಸ್.ಪ್ರಕಾಶ್ ಅವರು ಅಧ್ಯಕ್ಷತೆ ವಹಿಸುವರು. ನಗರಸಭಾ ಅಧ್ಯಕ್ಷರಾದ ಡಾ:ಹೆಚ್.ಎಸ್.ಅನಿಲ್ ಕುಮಾರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಸತೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್.ವೆಂಕಟೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್, ಅಪರ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕಾಂತರಾಜು ಹಾಗೂ ಗುರು ಚಿತ್ರಮಂದಿರದ ಮಾಲೀಕರಾದ …. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.