ಬೆಂಗಳೂರು: ಚಿತ್ರಮಂದಿರಗಳಿಗೆ ಶೇ.100 ರಷ್ಟು ಅನುಮತಿ ಸಿಗದ ಹಿನ್ನಲೆಯಲ್ಲಿ ಸ್ಟಾರ್ ಸಿನಿಮಾಗಳು ಬಿಡುಗಡೆ ಮಾಡಲು ನಿರ್ಮಾಪಕರು ಹಿಂದೇಟು ಹಾಕುತ್ತಿದ್ದಾರೆ.
ಈಗಾಗಲೇ ಭಜರಂಗಿ 2 ಚಿತ್ರ ಗಣೇಶ ಹಬ್ಬಕ್ಕೆ ರಿಲೀಸ್ ಆಗುತ್ತದೆಂದು ಘೋಷಿಸಿ ಮುಂದೂಡಿಕೆ ಮಾಡಿತ್ತು. ಇದೀಗ ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಸಿನಿಮಾ ಬಿಡುಗಡೆ ದಿನಾಂಕವೂ ಮುಂದೂಡಿಕೆಯಾಗಿದೆ.
ಎಲ್ಲಾ ಸರಿ ಹೋಗಿದ್ದರೆ ಸೆ.24 ಕ್ಕೆ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಇನ್ನೂ ಚಿತ್ರಮಂದಿರಗಳಲ್ಲಿ 100% ಪ್ರೇಕ್ಷಕರಿಗೆ ಅನುಮತಿ ಸಿಗದ ಹಿನ್ನಲೆಯಲ್ಲಿ ಅನಿರ್ದಿಷ್ಟಾವಧಿಗೆ ಚಿತ್ರ ಬಿಡುಗಡ ಮುಂದೂಡಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.