ಚುನಾವಣೆಯ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ನಟಿ ಪೂಜಾಗಾಂಧಿ ಅವರಿಗೆ ನ್ಯಾಯಾಲಯದಿಂದ ಬಿಗ್ ರಿಲೀಫ್ ದೊರೆತಿದೆ.
2013ರ ವಿಧಾನಸಭೆ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರದಿಂದ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದ ನಟಿ ಪೂಜಾ ಗಾಂಧಿ ವಿರುದ್ಧ ಅನುಮತಿ ಪಡೆಯದೆ ವಾಹನ ಬಳಕೆ ಮಾಡಿದ್ದಕ್ಕೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು.
ರಾಯಚೂರಿನ ಜೆಎಂಎಫ್‌ಸಿ ಎರಡನೇ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ನಡೆದಿದ್ದು, ನ್ಯಾಯಾಧೀಶೆ ಪೂರ್ಣಿಮಾ ಯಾದವ್ ಅವರು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಿಂದ ನಟಿ ಪೂಜಾಗಾಂಧಿ ಅವರನ್ನು ಖುಲಾಸೆಗೊಳಿಸಿ ತೀರ್ಪು ಪ್ರಕಟಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.