ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಈ ನಡುವೆ ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಮತ್ತು ಆರಾಧ್ಯ ಬಚ್ಚನ್ ರಲ್ಲಿ ಕೊರೊನಾ ಕಾಣಿಸಿಕೊಂಡಿತ್ತು.
ಅವರೆಲ್ಲರೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ನಟ ಅಮಿತಾಬ್ ಬಚ್ಚನ್ ಅವರಂತೂ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಆಗಾಗ್ಗೆ ಸುದ್ದಿ ತಲುಪಿಸುತ್ತಲೇ ಇರೋದು ಅಭಿಮಾನಿಗಳು ನಿರಾಳ ಭಾವ ಹೊಂದಲು ಕಾರಣವಾಗುತ್ತಿದೆ.