Publish Date: Sun, 31 Oct 2021 (08:04 IST)
Updated Date: Sun, 31 Oct 2021 (08:06 IST)
ಪುನೀತ್ ನಿಧನಕ್ಕೆ ನಾಡು ಕಂಬನಿ ಮಿಡಿದಿತ್ತು. ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಪುನೀತ್ ದರ್ಶನ ಪಡೆದು ನಮನ ಸಲ್ಲಿಸಿದರು.
ಅಂತ್ಯಕ್ರಿಯೆ ಸ್ಥಳದಲ್ಲಿ 200ರಿಂದ 250 ಆಸನ ವ್ಯವಸ್ಥೆ ಮಾಡಲಾಗಿದ್ದು, ಕುಟುಂಬಸ್ಥರು, ಗಣ್ಯರು ಮಾತ್ರ ಭಾಗಿಯಾಗಿದ್ದಾರೆ. ಮೊದಲ ಸಾಲಿನಲ್ಲಿ ರಾಜ್ ಕುಟುಂಬಸ್ಥರಿಗೆ ಆಸೀನರಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ, ಸಚಿವರಾದ ಆರ್.ಅಶೋಕ್ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಸಚಿವ ಗೋಪಾಲಯ್ಯ, ಶಾಸಕ ಎಸ್.ಆರ್.ವಿಶ್ವನಾಥ್, ರಾಕ್ಲೈನ್ ವೆಂಕಟೇಶ್, ನಟ ದುನಿಯಾ ವಿಜಯ್, ರವಿಚಂದ್ರನ್, ಯಶ್, ಸುದೀಪ್, ಉಪೇಂದ್ರ, ಗಣೇಶ್, ನಟಿಯರಾದ ಶ್ರುತಿ, ತಾರಾ, ರಚಿತಾ ರಾಮ್, ರಶ್ಮಿಕಾ ಮಂದಣ್ಣ ಸೇರಿದಂತೆ ಅನೇಕ ತಾರೆಯರು ಭಾಗಿಯಾಗಿದ್ದಾರೆ.