Publish Date: Sat, 26 Feb 2022 (09:44 IST)
Updated Date: Sat, 26 Feb 2022 (09:45 IST)
ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ಚೇತನ್ ಗೆ ಜಾಮೀನು ಮಂಜೂರಾಗಿದೆ.
ಹಾಗಿದ್ದರೂ ಚೇತನ್ ಗೆ ಇನ್ನೂ ಬಿಡುಗಡೆಯ ಭಾಗ್ಯ ಸಿಕ್ಕಿಲ್ಲ. ಸಮಯಕ್ಕೆ ಸರಿಯಾಗಿ ಶ್ಯೂರಿಟಿ ಸಿಗದ ಕಾರಣಕ್ಕೆ ಚೇತನ್ ರನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಅಲ್ಲದೆ, ಇಂದು ನಾಳೆ, ಕೋರ್ಟ್ ರಜೆ ಇದ್ದು, ಸೋಮವಾರ ಬಿಡುಗಡೆಯಾಗುವ ಸಾಧ್ಯತೆಯಿದೆ.
ಸಾಮಾಜಿಕ ಜಾಲತಾಣದಲ್ಲಿ ಹೈಕೋರ್ಟ್ ನ್ಯಾಯಾಧೀಶರ ತೀರ್ಪಿನ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೇತನ್ ರನ್ನು ಪೊಲೀಸರು ಬಂಧಿಸಿದ್ದರು.