ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಅವರು ಬುಧವಾರ (ಮೇ2) ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಅರಮನೆ ಮೈದಾನದ ವೈಟ್ ಪೆಟಲ್ಸ್‌ನಲ್ಲಿ ಇವರ ಮದುವೆ ಸಮಾರಂಭ ಏರ್ಪಟ್ಟಿದ್ದು, ಎರಡು ಕುಟುಂಬಗಳ ಸಂಬಂಧಿಕರು ಮತ್ತು ಆಪ್ತರು ಮಾತ್ರ ಪಾಲ್ಗೊಂಡಿದ್ದರು. ಅದೇ ದಿನ ಸಂಜೆ 7.30ಕ್ಕೆ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ಚಿತ್ರರಂಗದ ಗಣ್ಯರು ಆಗಮಿಸಿ ನವ ಜೋಡಿಗೆ ಶುಭಾಶಯ ಕೋರಿದ್ದಾರೆ.
ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಈ ಜೋಡಿ, ಇತ್ತಿಚೆಗೆ ಏಪ್ರಿಲ್ 29ರಂದು ಕೋರಮಂಗಲದ ಸಂತ ಆಯಂಟನಿ ಚರ್ಚ್‌ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ