Publish Date: Mon, 19 Apr 2021 (10:37 IST)
Updated Date: Mon, 19 Apr 2021 (10:38 IST)
ಹೈದರಾಬಾದ್ : ಇತ್ತೀಚೆಗೆ ಹಲವು ಸಿನಿಮಾ ತಾರೆಯರು ಕೊರೊನಾ ಸೋಂಕಿಗೆ ಒಳಗಾಗಿದ್ದು, ಇದೀಗ ದಕ್ಷಿಣ ಭಾರತದ ಖ್ಯಾತ ನಟಿ ಸಮೀರಾ ರೆಡ್ಡಿ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ತಾನು ಕೊರೊನಾ ಸೋಂಕಿಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ. ತಾನು ಮನೆಯಲ್ಲಿ ಹೋಮ್ ಕ್ವಾರಂಟೈನ್ ಆಗಿದ್ದು, ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.
ಅಲ್ಲದೇ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸಕ್ರಿಯರಾಗಿದ್ದು, ತಮ್ಮ ಪುಟದಲ್ಲಿ ನಿಯಮಿತವಾಗಿ ತಮ್ಮ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡುತ್ತಿದ್ದಾರೆ ಎನ್ನಲಾಗಿದೆ.