ಹೈದರಾಬಾದ್ : ನಟ, ನಿರ್ಮಾಪಕ ಬಂಡ್ಲ ಗಣೇಶ್ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ.
ನಿರ್ಮಾಪಕ ಬಂಡ್ಲ ಗಣೇಶ್ ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಹೈದರಾಬಾದ್ ನ ಅಪೊಲೊ ಆಸ್ಪತ್ರೆಗೆ ದಾಖಲಿಸಿದ್ದು ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆ.
ಇದೀಗ ಅವರ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದ್ದು, ಅವರನ್ನು ಐಸಿಯುನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಬಗ್ಗೆ ಅವರ ಕುಟುಂಬವು ಬಹಳ ಚಿಂತಿತರಾಗಿದ್ದಾರೆ ಎನ್ನಲಾಗಿದೆ.