ಬೆಂಗಳೂರು : ನಟ ದರ್ಶನ್ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಕ್ರಿಯೆಟ್ ಮಾಡಿರುವ ಕಿಡಿಗೇಡಿಗಳಿಗೆ ನಟ ದರ್ಶನ್ ಅವರು ಖಡಕ್ ವಾರ್ನಿಂಗ್ ಮಾಡಿದ್ದಾರೆ.
ಇತ್ತೀಚೆಗೆ ನಟ ದರ್ಶನ್ ಅವರ ಹೆಸರಲ್ಲಿ ಯಾರೋ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ಕ್ರಿಯೆಟ್ ಮಾಡಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇದನ್ನು ತಿಳಿದ ನಟ ದರ್ಶನ್ ಅವರು ಸೈಬರ್ ಕ್ರೈಂ ನವರಿಗೆ ದೂರು ನೀಡಿದ್ದಾರೆ.
ಹಾಗೇ ಈ ಬಗ್ಗೆ ತಮ್ಮ ಫೇಸ್ ಬುಕ್ ಹಾಗೂ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ ನಟ ದರ್ಶನ್ ಅವರು,’ಇತ್ತೀಚಿಗೆ ತಿಳಿದು ಬಂದಿರುವಂತೆ ನನ್ನ ಹೆಸರಲ್ಲಿ ಕೆಲವು ಕಿಡಿಗೇಡಿಗಳ ಅನೇಕ ನಕಲಿ ಫೇಸ್ ಬುಕ್ ಖಾತೆಗಳಿವೆ. ಈ ಖಾತೆಗಳಿಂದ ಕೆಲವು ವ್ಯಕ್ತಿಗಳ ಮೇಲೆ ಅವಹೇಳನಕಾರಿ ಹೇಳಿಕೆಗಳು ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ. ಸೈಬರ್ ಕ್ರೈಂ ಡಿಪಾರ್ಟ್ಮೆಂಟ್ ಈ ರೀತಿ ಸೋಶಿಯಲ್ ಮೀಡಿಯಾ ದುರ್ಬಳಕೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈ ಕೊಳ್ಳುವುದಾಗಿ ಹೇಳಿದ್ದಾರೆ. ದಯಮಾಡಿ ಯಾರೂ ಇಂತಹ ಕೆಲಸಗಳಲ್ಲಿ ತೊಡಗಬೇಡಿ ಎಂದು ಕಳಕಳಿಯ ವಿನಂತಿ’ ಎಂದು ಖಡಕ್ ಆಗಿ ವಾರ್ನ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ