Webdunia - Bharat's app for daily news and videos

Install App

ನಕಲಿ ಫೇಸ್ ಬುಕ್ ಖಾತೆ ಕ್ರಿಯೆಟ್ ಮಾಡಿದ ಕಿಡಿಗೇಡಿಗಳಿಗೆ ದರ್ಶನ್ ಖಡಕ್ ವಾರ್ನಿಂಗ್

Webdunia
ಗುರುವಾರ, 14 ಜೂನ್ 2018 (06:37 IST)
ಬೆಂಗಳೂರು : ನಟ ದರ್ಶನ್ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಕ್ರಿಯೆಟ್ ಮಾಡಿರುವ ಕಿಡಿಗೇಡಿಗಳಿಗೆ ನಟ ದರ್ಶನ್ ಅವರು ಖಡಕ್ ವಾರ್ನಿಂಗ್ ಮಾಡಿದ್ದಾರೆ.


ಇತ್ತೀಚೆಗೆ ನಟ ದರ್ಶನ್ ಅವರ ಹೆಸರಲ್ಲಿ ಯಾರೋ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ಕ್ರಿಯೆಟ್ ಮಾಡಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ  ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇದನ್ನು ತಿಳಿದ ನಟ ದರ್ಶನ್ ಅವರು ಸೈಬರ್ ಕ್ರೈಂ ನವರಿಗೆ ದೂರು ನೀಡಿದ್ದಾರೆ.


ಹಾಗೇ ಈ ಬಗ್ಗೆ ತಮ್ಮ ಫೇಸ್ ಬುಕ್ ಹಾಗೂ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ ನಟ ದರ್ಶನ್ ಅವರು,’ಇತ್ತೀಚಿಗೆ ತಿಳಿದು ಬಂದಿರುವಂತೆ ನನ್ನ ಹೆಸರಲ್ಲಿ ಕೆಲವು ಕಿಡಿಗೇಡಿಗಳ ಅನೇಕ ನಕಲಿ ಫೇಸ್ ಬುಕ್ ಖಾತೆಗಳಿವೆ. ಈ ಖಾತೆಗಳಿಂದ ಕೆಲವು ವ್ಯಕ್ತಿಗಳ ಮೇಲೆ ಅವಹೇಳನಕಾರಿ ಹೇಳಿಕೆಗಳು ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ. ಸೈಬರ್ ಕ್ರೈಂ ಡಿಪಾರ್ಟ್ಮೆಂಟ್ ಈ ರೀತಿ ಸೋಶಿಯಲ್ ಮೀಡಿಯಾ ದುರ್ಬಳಕೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈ ಕೊಳ್ಳುವುದಾಗಿ ಹೇಳಿದ್ದಾರೆ. ದಯಮಾಡಿ ಯಾರೂ ಇಂತಹ ಕೆಲಸಗಳಲ್ಲಿ ತೊಡಗಬೇಡಿ ಎಂದು ಕಳಕಳಿಯ ವಿನಂತಿ’ ಎಂದು ಖಡಕ್ ಆಗಿ ವಾರ್ನ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments