ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಪುಣ್ಯಸ್ಮರಣೆ ದಿನದಂದು ಅವರ ದತ್ತುಪುತ್ರ ಎಂದೇ ಕರೆಯಿಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನುಡಿನಮನ ಸಲ್ಲಿಸಿದ್ದಾರೆ.
ನನ್ನ ಪ್ರೀತಿಯ ಸೀನಿಯರ್ ಅಂಬಿ ಅಪ್ಪಾಜಿ ಇಂದಿಗೆ ದೈಹಿಕವಾಗಿ ಅಗಲಿ 2 ಸಂವತ್ಸರಗಳು ಕಳೆದಿವೆ. ಆದರೆ ನಮ್ಮೆಲ್ಲರ ಮನಗಳಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ನೇರ ನುಡಿಯ ವ್ಯಕ್ತಿತ್ವ, ಮಾಡಿರುವ ಸಹೃದಯಿ ಕಾರ್ಯಗಳು ಸದಾ ಕನ್ನಡಿಗರ ಮನಸ್ಸಲ್ಲಿ ಜೀವಂತವಾಗಿರುತ್ತದೆ ಎಂದು ದರ್ಶನ್ ಹಳೆಯ ಫೋಟೋವೊಂದರ ಸಮೇತ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.