Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿದೆ ಎಂದು ತಿಳಿದುಬಂದಿದೆ.
ಸಣ್ಣ ಪುಟ್ಟ ಗಾಯಗಳಾಗಿರುವ ದಿವ್ಯಾ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಸೋಮವಾರ ಕೊರೋನಾ ವ್ಯಾಕ್ಸಿನ್ ತೆಗೆದುಕೊಂಡು ಮನೆಗೆ ಮರಳುತ್ತಿದ್ದಾಗ ಆಕ್ಸಿಡೆಂಟ್ ಆಗಿದೆ.
ಇನ್ ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ದಿವ್ಯಾ ಸಣ್ಣ ಪುಟ್ಟ ಗಾಯಗಳಾಗಿವೆಯಷ್ಟೇ. ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗೆ ನೈಟ್ ಕರ್ಫ್ಯೂ ವೇಳೆ ಪೊಲೀಸರ ಜೊತೆ ವಾಗ್ವಾದ ಮಾಡಿದ್ದಕ್ಕಾಗಿ ದಿವ್ಯಾ ಸುದ್ದಿಯಲ್ಲಿದ್ದಾರೆ.