ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಪ್ರಕರಣದ ವಿಚಾರಣೆ ಇನ್ನೂ ಜಾರಿಯಲ್ಲಿದೆ. ಇದೀಗ ನಿರ್ಮಾಪಕ ಶಂಕರೇಗೌಡರನ್ನು ಬಂಧಿಸಿರುವ ಪೊಲೀಸರು ಮತ್ತಷ್ಟು ಮಾಹಿತಿ ಪಡೆದಿದ್ದಾರೆ.
ನಿನ್ನೆ ಶಂಕರೇಗೌಡರನ್ನು ವಿಚಾರಣೆಗೊಳಪಡಿಸಿದ ವೇಳೆ ಅವರು ಹಲವು ಪ್ರತಿಷ್ಠಿತ ನಟ-ನಟಿಯರ ಹೆಸರನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಟಾಲಿವುಡ್, ಸ್ಯಾಂಡಲ್ ವುಡ್, ಬಾಲಿವುಡ್ ನಟ-ನಟಿಯರು, ಪ್ರತಿಷ್ಠಿತ ಉದ್ಯಮಿಗಳ ಹೆಸರನ್ನೂ ಹೇಳಿದ್ದಾರೆ.
ಅವರು ನೀಡಿದ ಮಾಹಿತಿಯಂತೆ 15-20 ಮಂದಿಯ ಪಟ್ಟಿ ತಯಾರಿಸಲಾಗಿದ್ದು, ಸದ್ಯದಲ್ಲೇ ಇವರೆಲ್ಲರಿಗೂ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕಲಾವಿದರಿಗೆ ಸಂಕಷ್ಟ ಎದುರಾಗಲಿದೆ.