ಬೆಂಗಳೂರು: ಜೋಗಿ ಪ್ರೇಮ್ ಸಿನಿಮಾ ಎಂದರೆ ಗಿಮಿಕ್ ಮಾಡುತ್ತಾರೆ ಎಂದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈ ಬಾರಿ ವಿಲನ್ ಸಿನಿಮಾ ಬಗ್ಗೆ ಯಾರೋ ಕಿಡಿಗೇಡಿಗಳು ಪ್ರೇಮ್ ಅವರ ಪ್ರಚಾರ ವೈಖರಿಯನ್ನೇ ದುರುಪಯೋಗಪಡಿಸಿಕೊಂಡು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.
ಶಿವರಾಜ್ ಕುಮಾರ್ ಮತ್ತು ಕಿಚ್ಚ ಸುದೀಪ್ ಜತೆಯಾಗಿ ನಟಿಸಿರುವ ‘ವಿಲನ್’ ಸಿನಿಮಾ ಅಡಿಯೋ ಧ್ವನಿ ಸುರುಳಿ ಬಿಡುಗಡೆ ಸಮಾರಂಭಕ್ಕೆ ಪ್ರಧಾನಿ ಮೋದಿ ಅತಿಥಿಯಾಗಿ ಬರಲಿದ್ದಾರೆ ಎಂಬ ಸುದ್ದಿಯನ್ನು ಯಾರೋ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಆದರೆ ಇದೆಲ್ಲಾ ಸುಳ್ಳು ಸುದ್ದಿ ಎಂದು ಸ್ವತಃ ಜೋಗಿ ಪ್ರೇಮ್ ಸ್ಪಷ್ಟನೆ ನೀಡಿದ್ದಾರೆ. ಆದರೆ ವಿಲನ್ ಸಿನಿಮಾ ಬಗ್ಗೆ ಇಂತಹದ್ದೊಂದು ಸುದ್ದಿ ಹರಿಬಿಟ್ಟಿದ್ದು ಯಾರು ಎಂದು ತಿಳಿದುಬಂದಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ