Select Your Language

Notifications

webdunia
webdunia
webdunia
webdunia

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಫ್ಯಾನ್ಸ್ ವಿಶೇಷ ಸಿದ್ಧತೆ

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಫ್ಯಾನ್ಸ್ ವಿಶೇಷ ಸಿದ್ಧತೆ
ಬೆಂಗಳೂರು , ಸೋಮವಾರ, 19 ಡಿಸೆಂಬರ್ 2022 (08:40 IST)
Photo Courtesy: Twitter
ಬೆಂಗಳೂರು: ಜನವರಿ 8 ಎಂದರೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಪಾಲಿಗೆ ವಿಶೇಷ. ಈ ದಿನ ಯಶ್ ಹುಟ್ಟುಹಬ್ಬವಿರುವುದು ಇದಕ್ಕೆ ಕಾರಣ.

ಕಳೆದ ಎರಡು ವರ್ಷಗಳಿಂದ ಕೊರೋನಾದಿಂದಾಗಿ ಯಶ್ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಅವರು ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುವ ಸಾಧ್ಯತೆಯಿದೆ.

ಆದರೆ ಅವರ ಅಭಿಮಾನಿಗಳು ಯಶ್ ಹುಟ್ಟುಹಬ್ಬವನ್ನು ಒಂದು ಉತ್ಸವದಂತೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಜನವರಿ 1 ರಿಂದ 8 ರವರೆಗೆ ಒಂದು ವಾರಗಳ ಕಾಲ ಯಶ್ ಜೀವನದ ಕುರಿತಾಗಿ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ ಮತ್ತು ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ತಮ್ಮ ಮೆಚ್ಚಿನ ನಟನ ಹುಟ್ಟುಹಬ್ಬವನ್ನು ವಿಶೇಷವಾಗಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಸದ್ಯದಲ್ಲೇ ಈ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಕೆ9: ಈ ವಾರ ಅನುಪಮಾ ಗೌಡ ಔಟ್