ಕನ್ನಡ ಚಿತ್ರರಂಗದ ಬೆಳವಣಿಗೆಗೆ ಸಂಪೂರ್ಣ ಸಹಕಾರ ಮತ್ತು ನೆರವು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಸರ್ಕಾರ ಕನ್ನಡ ಚಿತ್ರೋದ್ಯಮದ ಪರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಫಿಲ್ಮ್ ಸಿಟಿ: ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ, ಪ್ರವಾಸೋದ್ಯಮ ಇಲಾಖೆ ಮೂಲಕ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು. ಕನ್ನಡ ಚಿತ್ರರಂಗದ ಬೆಳವಣಿಗೆಗೆ ಮೈಸೂರು ಜಿಲ್ಲೆಯ ಕಲಾವಿದರು ಮತ್ತು ತಂತ್ರಜ್ಞರ ಕೊಡುಗೆ ಅಪಾರ. ಡಾ.ರಾಜಕುಮಾರ್ ಸಹ ಅದೇ ಜಿಲ್ಲೆಯವರು ಎಂದು ಮುಖ್ಯಮಂತ್ರಿಗಳು ನುಡಿದರು.
ಮಲ್ಟಿಪ್ಲೆಕ್ಸ್ ಥಿಯೇಟರ್ ನಲ್ಲಿ ಕನ್ನಡ ಚಿತ್ರ ಪ್ರದರ್ಶನವಾಗಬೇಕು. ತಿಥಿಯಂತಹ ಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ಹಿಂದೆ ಬರುತ್ತಿದ್ದ ಚಿತ್ರಗಳಲ್ಲಿ ಮನರಂಜನೆ ಜೊತೆಗೆ ಸಮಾಜ ಮತ್ತು ಜನರಿಗೆ ಸಂದೇಶವೂ ಇರುತ್ತಿತ್ತು. ಈಗ ಅಂತಹ ಚಿತ್ರಗಳ ಸಂಖ್ಯೆ ಕಡಿಮೆ ಆಗಿದೆ.
ಡಾ.ರಾಜ್ ಅವರ ಬಂಗಾರದ ಮನುಷ್ಯ ಚಿತ್ರ ಸಮಾಜದಲ್ಲಿ ಬದಲಾವಣೆ ತರುವಲ್ಲಿ ಪ್ರೇರಣೆ ಆಯಿತು. ಇದು ಕರ್ನಾಟಕ, ಹಾಗಾಗಿ ಇಲ್ಲಿ ಎಲ್ಲ ಮಲ್ಟಿಪ್ಲೆಕ್ಸ್ ಥಿಯೇಟರ್ ಗಳು ಸೇರಿದಂತೆ ಎಲ್ಲಡೆ ಕನ್ನಡ ಚಿತ್ರಗಳಿಗೆ ಆದ್ಯತೆ ಸಿಗಲೇಬೇಕು. ಜನರೂ ಕನ್ನಡ ಚಿತ್ರಗಳನ್ನೇ ಹೆಚ್ಚಾಗಿ ನೋಡಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.