Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನಟ ಪುನೀತ್ ಅಕ್ಟೋಬರ್ 29ರಂದು ಹೃದಯಾಘಾತದಿಂದ ಅಕಾಲಿಕವಾಗಿ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ನಾಡು ಕಂಬನಿ ಮಿಡಿದಿತ್ತು. ಅಂತಿಮ ನಮನ ಸಲ್ಲಿಸಿದರು.
ಅಲ್ಲಿಂದ ಮೆರವಣಿಗೆಯಲ್ಲಿ ಪಾರ್ಥಿವ ಶರೀರವನ್ನು ಕಂಠೀರವ ಸ್ಟುಡಿಯೋಗೆ ಕರೆತರಲಾಯಿತು. ಅಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನಗಳು ನೆರವೇರಿದವು.
ಡಾ.ರಾಜ್ ಸಮಾಧಿಯಿಂದ 125 ಅಡಿ ಅಂತರದಲ್ಲಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ಅಂತರದಲ್ಲಿ ಪುನೀತ್ ಅಂತ್ಯಕ್ರಿಯೆ ನೆರವೇರಿದೆ.
ಎಲ್ಲರ ಸಹಕಾರದಿಂದ ಅಂತ್ಯಕ್ರಿಯೆ ಶಾಂತಿಯುತವಾಗಿ ನೆರವೇರಿದೆ. ಸರ್ಕಾರ, ಅಭಿಮಾನಿಗಳು ಸೇರಿ ಎಲ್ಲರಿಗೂ ಧನ್ಯವಾದಗಳು. ಪುನೀತ್ ಇಲ್ಲದ ಕೊರಗು ಕೊನೆಯವರೆಗೂ ಇರುತ್ತದೆ. ಮಂಗಳವಾರ ಹಾಲು-ತುಪ್ಪ ಕಾರ್ಯ ನೆರವೇರಿಸುತ್ತೇವೆ ಎಂದು ರಾಘವೇಂದ್ರ ರಾಜ್‌ಕುಮಾರ್ ನುಡಿದಿದ್ದಾರೆ.