Publish Date: Sun, 31 Oct 2021 (07:57 IST)
Updated Date: Sun, 31 Oct 2021 (07:58 IST)
ಪುನೀತ್ ನಿಧನಕ್ಕೆ ನಾಡು ಕಂಬನಿ ಮಿಡಿದಿತ್ತು. ನಿನ್ನೆ (ಅಕ್ಟೋಬರ್ 30) ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು.
ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಪುನೀತ್ ದರ್ಶನ ಪಡೆದು ನಮನ ಸಲ್ಲಿಸಿದರು. ಇಂದು (ಭಾನುವಾರ) ಮುಂಜಾನೆ 4ಕ್ಕೆ ಸಾರ್ವಜನಿಕರಿಗೆ ದರ್ಶನವನ್ನು ಅಂತ್ಯಗೊಳಿಸಲಾಯಿತು. ಕೊನೆಯದಾಗಿ ಭದ್ರತಾ ಪಡೆಗಳು ನಟನ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ನಂತರ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಪುನೀತ್ ಹಣೆಗೆ ಮುತ್ತಿಟ್ಟು, ಅಂತಿಮ ನಮನ ಸಲ್ಲಿಸಿದರು.
Ramya kosira
Publish Date: Sun, 31 Oct 2021 (07:57 IST)
Updated Date: Sun, 31 Oct 2021 (07:58 IST)