ಅಳೆದು ತೂಗಿ ರಾಜ್ಯ ಸರ್ಕಾರ ಕೊನೆಗೂ ಟಿಕೆಟ್ ದರ ಗರಿಷ್ಠ 200 ರೂ.ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಅಧಿಸೂಚನೆ ಇವತ್ತು ಜಾರಿಯಾಗಿದೆ.
ಬಜೆಟ್`ನಲ್ಲೇ ಗರಿಷ್ಠ ಟಿಕೆಟ್ ದರ 200 ರೂ.ಗೆ ನಿಗದಿ ಮಾಡಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಆದರೆ, ಆದೇಶ ಮಾತ್ರ ಜಾರಿಯಾಗಿರಲಿಲ್ಲ. ಈ ಬಗ್ಗೆ ಹಲವು ಟೀಕೆಗಳೂ ಕೇಳಿಬಂದಿದ್ದವು. ಈ ಮಧ್ಯೆ ನಿನ್ನೆ ದುಬೈನಿಂದ ಆಗಮಿಸಿದ ಸಿದ್ದರಾಮಯ್ಯ ದುಬಾರಿ ಬೆಲೆಗೆ ಟಿಕೆಟ್ ಖರೀದಿಸಿ ಸಿನಿಮಾ ನೋಡಿದ್ದಾರೆ ಎಂಬ ವಿವಾದವೂ ಹರಡಿತ್ತು.
ಈ ಮಧ್ಯೆ, ಇಂದು ಸರ್ಕಾರದಿಂದ ಅಧಿಸೂಚನೆ ಹೊರ ಬಿದ್ದಿದೆ. ಮಲ್ಟಿಪ್ಲೆಕ್ಸ್`ಗಳಿಗೆ ಮಾತ್ರವಲ್ಲ ಎಲ್ಲ ಚಿತ್ರಮಂದಿರಗಳಿಗೂ ಈ ನಿಯಮ ಅನ್ವಯವಾಗಲಿದೆ. ಗೋಲ್ಡ್ ಸ್ಕ್ರೀನ್ ಮತ್ತು ಗೋಲ್ಡ್ ಕ್ಲಾಸ್`ಗೆ ಮಾತ್ರ ೀ ನಿಯಮ ಅನ್ವಯವಾಗುದಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ