ಚೆನ್ನೈ : ಆನ್ ಲೈನ್ ನಲ್ಲಿ ಜೂಜಾಟವನ್ನು ಉತ್ತೇಜಿಸುವ ಜಾಹೀರಾತುಗಳಲ್ಲಿ ನಟಿಸಿದ ಹಿನ್ನಲೆಯಲ್ಲಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ವಿರುದ್ಧ ದೂರು ದಾಖಲಾಗಿದೆ.
ಬಹುಭಾಷಾ ನಟಿ ತಮನ್ನಾ ಭಾಟಿಯಾ ಹಾಗೂ ವಿರಾಟ್ ಕೊಹ್ಲಿ ಆನ್ ಲೈನ್ ನಲ್ಲಿ ಜೂಜಾಟವನ್ನು ಉತ್ತೇಜಿಸುವ ಜಾಹೀರಾತುಗಳಲ್ಲಿ ನಟಿಸಿದ್ದರು. ಆದರೆ ಇತ್ತೀಚೆಗೆ ಜೂಜಾಟಕ್ಕೆ ಬಳಸಿದ ಹಣವನ್ನು ಹಿಂತಿರುಗಿಸಲು ಸಾಧ್ಯವಾಗದ ಕಾರಣ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಹಿನ್ನಲೆಯಲ್ಲಿ ಚೆನ್ನೈ ಮೂಲದ ವಕೀಲರೊಬ್ಬರು ಯುವಕರಿಗೆ ಉತ್ತಮ ಮಾರ್ಗದರ್ಶನ ನೀಡುವ ಜಾಹೀರಾತುಗಳಲ್ಲಿ ಭಾಗವಹಿಸುವ ಬದಲು ಕೆಟ್ಟ ದಾರಿ ಹಿಡಿಯುವಂತೆ ಪ್ರಚೋದಿಸುತ್ತಿದ್ದಾರೆ ಆದಕಾರಣ ಇವರನ್ನು ಬಂಧಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ಗೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ಆಗಸ್ಟ್ 4ರಂದು ವಿಚಾರಣೆ ನಡೆಸಲಿದೆ ಎನ್ನಲಾಗಿದೆ.