Publish Date: Sun, 14 Mar 2021 (09:26 IST)
Updated Date: Sun, 14 Mar 2021 (09:27 IST)
ಬೆಂಗಳೂರು: ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರಾ? ಹೀಗೊಂದು ಸುಳಿವನ್ನು ಅವರ ಸಹೋದರ ಮಧು ಬಂಗಾರಪ್ಪ ನೀಡಿದ್ದಾರೆ.
ಜೆಡಿಎಸ್ ತೊರೆದು ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಈಗಾಗಲೇ ಡಿಕೆ ಶಿವಕುಮಾರ್ ಭೇಟಿಯಾಗಿ ಮಧು ಬಂಗಾರಪ್ಪ ಮಾತುಕತೆಯನ್ನೂ ನಡೆಸಿದ್ದಾರೆ.
ಇದರ ನಡುವೆ ತಮ್ಮ ಸಹೋದರಿ, ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಕೂಡಾ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಅವರು ಸುಳಿವು ನೀಡಿದ್ದಾರೆ. ಹಿಂದೊಮ್ಮೆ ಗೀತಾ ಶಿವರಾಜ್ ಕುಮಾರ್ ಜೆಡಿಎಸ್ ನಿಂದ ಚುನಾವಣೆಗೂ ಸ್ಪರ್ಧಿಸಿದ್ದರು. ಮುಂದೆ ಅವರೂ ಪಕ್ಷಕ್ಕೆ ಸೇರ್ಪಡೆಯಾಗಿ ಸಕ್ರಿಯ ರಾಜಕೀಯಕ್ಕೆ ಮರಳಬಹುದು ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.