ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತನಾಗಿರುವ ರಾಹುಲ್ ಶೆಟ್ಟಿ ಜತೆಗಿರುವ ಫೋಟೋ ವೈರಲ್ ಆಗುತ್ತಿರುವ ಹಿನ್ನಲೆಯಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.
ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಗುರುಕಿರಣ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ನಾವು ಎಲ್ಲೋ ಹೋಗಿರುತ್ತೇವೆ. ಆಗ ಯಾರೋ ಪರಿಚಯ ಮಾಡಿಸಿಕೊಂಡು ಫೋಟೋ ತೆಗೆಸಿಕೊಳ್ಳುತ್ತಾರೆ. ಹಾಗಂತ ಅವರೆಲ್ಲರ ಜತೆಗೂ ನಮಗೆ ಸಂಪರ್ಕವಿದೆ ಎಂದರ್ಥವಲ್ಲ’ ಎಂದಿದ್ದಾರೆ. ಈ ಮೂಲಕ ರಾಹುಲ್ ಶೆಟ್ಟಿಗೂ ತಮಗೂ ಸಂಬಂಧವಿಲ್ಲ ಎಂದಿದ್ದಾರೆ.