ಬೆಂಗಳೂರು: ಈ ಬಾರಿ ನಾಡಹಬ್ಬ ದಸರಾ ಉದ್ಘಾಟನೆಗೆ ಖ್ಯಾತ ಸಂಗೀತ ನಿರ್ದೇಶಕ, ಸಾಹಿತಿ ಹಂಸಲೇಖ ಅವರನ್ನು ರಾಜ್ಯ ಸರ್ಕಾರ ಆಹ್ವಾನಿಸಿದೆ.
ಸಿಎಂ ಸಿದ್ದರಾಮಯ್ಯ ಈ ಬಾರಿ ಹಂಸಲೇಖ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಘೋಷಿಸುತ್ತಿದ್ದಂತೇ ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆ ಶುರುವಾಗಿದೆ.
ಹಂಸಲೇಖ ಈ ಹಿಂದೆ ಪೇಜಾವರ ಸ್ವಾಮೀಜಿಗಳು ಮಾಂಸ ತಿನ್ನುತ್ತಾರೆಯೇ ಎಂದು ತಮಾಷೆ ಮಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದರ ಜೊತೆಗೆ ಇತ್ತೀಚೆಗೆ ಅವರ ಎಡಪಂಥೀಯ ಚಿಂತನೆಗಳು ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದವು. ಹೀಗಾಗಿ ಅವರು ದಸರಾ ಉದ್ಘಾಟನೆಗೆ ಆಗಮಿಸುತ್ತಾರೆ ಎಂದು ತಿಳಿಯುತ್ತಿದ್ದಂತೇ ಕೆಲವರು ಸೋಷಿಯಲ್ ಮೀಡಿಯಾ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಇನ್ನು, ಕೆಲವರು ಕನ್ನಡ ಸಂಗೀತ, ಸಾಹಿತ್ಯ ಕ್ಷೇತ್ರದಲ್ಲಿ ಕೊಡುಗೆ ಕೊಟ್ಟ ವ್ಯಕ್ತಿ ದಸರಾ ಉದ್ಘಾಟನೆ ಮಾಡುತ್ತಿರುವುದು ಸರಿ ಎಂದು ಸಮರ್ಥಿಸಿಕೊಂಡಿದ್ದಾರೆ.