ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಜೋಡಿ ಹಸೆಮಣೆ ಏರಲು ಸಿದ್ಧವಾಗಿದೆ. ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಜೋಡಿ ಇದೇ ತಿಂಗಳು ವಿವಾಹವಾಗಲಿದ್ದಾರೆ.
ಇವರಿಬ್ಬರೂ ಆಗಸ್ಟ್ ನಲ್ಲಿ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಈಗಾಗಲೇ ಹರಿದಾಡಿತ್ತು. ಅವರ ಮದುವೆ ಆಮಂತ್ರಣ ಪತ್ರಿಕೆಯೂ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆದರೆ ಇಬ್ಬರೂ ಈ ಸುದ್ದಿಯನ್ನು ಅಧಿಕೃತಗೊಳಿಸಿರಲಿಲ್ಲ.
ಇದೀಗ ಹರ್ಷಿಕಾ ತಾಯ್ತ ಸಿನಿಮಾದ ಅಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮದುವೆಯನ್ನು ಖಚಿತಪಡಿಸಿದ್ದಾರೆ. ಆಗಸ್ಟ್ 23 ಮತ್ತು 24 ರಂದು ಕೊಡಗಿನ ಅಂಬತ್ತಿ ಕೊಡವ ಸಮಾಜದಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ. ಹಲವು ವರ್ಷಗಳಿಂದ ಇಬ್ಬರೂ ಜೊತೆಯಲ್ಲೇ ಓಡಾಡುತ್ತಿದ್ದರು. ಇಬ್ಬರೂ ಇದೀಗ ತಮ್ಮ ಪ್ರೀತಿಗೆ ಮದುವೆಯ ಮುದ್ರೆಯೊತ್ತುತ್ತಿದ್ದಾರೆ.