ಹುಬ್ಬಳ್ಳಿ: ಸ್ನೇಹಿತನಿಂದಲೇ ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
ನಿರಂಜನ್ ಹಿರೇಮಠ ಹಾಗೂ ಪತ್ನಿ ಗೀತಾ ಅವರಲ್ಲಿ ಮಗಳು ನೇಹಾ ಬಗ್ಗೆ ಹರ್ಷಿಕಾ ದಂಪತಿ ವಿಚಾರಿಸಿದ್ದಾರೆ. ಈ ವೇಳೆ ನೇಹಾ ಪೋಚಕರು ಭಾವುಕರಾಗಿದ್ದಾರೆ. ಕೊಲೆ ಮಾಡುವ ಹಕ್ಕು ಯಾರಿಗೂ ಇಲ್ಲ. ನೇಹಾ ಹತ್ಯೆಗೆ ನ್ಯಾಯ ಸಿಗಬೇಕೆಂದರು.
ಬೆಂಗಳೂರಿನ ಹೊಟೇಲ್‌ನಲ್ಲಿ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಸಚಿವರಲ್ಲಿ, 'ಬೆಂಗಳೂರಿನಲ್ಲಿ ಕನ್ನಡ ಮಾತನಾಡಿದ್ದಕ್ಕೆ ಕೆಲವು ಕಿಡಿಗೇಡಿಗಳು ಹಲ್ಲೆ ನಡೆಸಿ ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಳ್ಳಲು ಪ್ರಯತ್ನಿಸಿದ್ದರು. ಈ ಕುರಿತು ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ನನಗೆ ನ್ಯಾಯ ಕೊಡಿಸಬೇಕು' ಎಂದು ಮನವಿ ಮಾಡಿದರು.