ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ಅವರ ಮೇಲೆ ತಮಿಳು ಗಾಯಕಿ ಚಿನ್ಮಯಿ ಶ್ರೀಪಾದ್ ಅವರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು, ಈ ಬಗ್ಗೆ ಇದೀಗ ರಘು ದೀಕ್ಷಿತ್ ಪತ್ನಿ ಮಯೂರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟರ್ ನಲ್ಲಿ ಬರೆದುಕೊಂಡಿರುವ ಮಯೂರಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವ ಮಹಿಳೆಯರು ಧೈರ್ಯದಿಂದ ಮುಂದೆ ಬಂದು ಮುಕ್ತವಾಗಿ ಅನ್ಯಾಯದ ವಿರುದ್ಧ ಹೋರಾಡಬೇಕು. ಅಸಭ್ಯವಾಗಿ, ನಡೆದುಕೊಂಡವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ.
ಲೈಂಗಿಕ ಕಿರುಕುಳಕ್ಕೊಳಗಾಗಿರುವ ಮಹಿಳೆಯರಿಗೆ ತಾನು ಬೆಂಬಲ ನೀಡುವುದಾಗಿಯೂ ಹಾಗೂ ಲೈಂಗಿಕ ದೌರ್ಜನ್ಯವೆಸಗಿದವರಿಗೆ ಸರಿಯಾದ ಶಿಕ್ಷೆ ನೀಡಿ ಆ ಮೂಲಕ ಬೇರೆ ಪುರುಷರು ಪಾಠ ಕಲಿಯುವಂತಾಗಬೇಕು ಎಂದು ತಿಳಿಸಿದ್ದಾರೆ.
ಈಗಾಗಲೇ ರಘು ದೀಕ್ಷಿತ್ ಹಾಗೂ ಮಯೂರಿ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನ ಪಡೆಯುವ ನಿರ್ಧಾರ ಮಾಡಿದ್ದಾರೆ. ಈಗಾಗಲೇ ಅವರಬ್ಬರ ವಿಚ್ಛೇದನ ಪ್ರಕ್ರಿಯೆ ಜಾರಿಯಲ್ಲಿದ್ದು, ಆದಷ್ಟು ಬೇಗ ಅವರು ವಿಚ್ಛೇದನ ಪಡೆಯತ್ತಿರುವ ವಿಚಾರವನ್ನು ಸ್ವತಃ ರಘು ದೀಕ್ಷಿತ್ ಅವರೇ ತಮ್ಮ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.