ಹೈದರಾಬಾದ್ : ಸುಕುಮಾರ್ ನಿರ್ದೇಶನದ ಆ್ಯಕ್ಷನ್ ಥ್ರಿಲ್ಲರ್ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸುತ್ತಿದ್ದಾರೆ.
ಈ ಚಿತ್ರ ಕೆಂಪುಶ್ರೀಗಂಧದ ಕಳ್ಳಸಾಗಾಣಕೆಯ ಕುರಿತಾದ ಕಥೆಯನ್ನು ಒಳಗೊಂಡಿದೆ. ಇದು ಸಂಪೂರ್ಣವಾಗಿ ಆ್ಯಕ್ಷನ್ ಥ್ರಿಲ್ಲರ್ ಚಿತ್ರವಾಗಿದೆ. ಈ ಚಿತ್ರದ ಆ್ಯಕ್ಷನ್ ಎಪಿಸೋಡ್ ಗಳಿಗಾಗಿ 40ಕೋಟಿ ರೂ. ಖರ್ಚು ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಈ ಚಿತ್ರ ಆಗಸ್ಟ್ 13ರಂದು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅಲ್ಲು ಅರ್ಜುನ್ ಅವರಿಗೆ ಜೋಡಿಯಾಗಿ ನಟಿಸುತ್ತಿದ್ದಾರೆ.