ಬೆಂಗಳೂರು : ಪುನೀತ್ ರಾಜ್ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್ ಇಂದು (ಅಕ್ಟೋಬರ್ 31) ಘೋಷಣೆ ಮಾಡಿದ್ದಾರೆ.
ಮುಂದಿನ ವರ್ಷದಿಂದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ತಿಳಿಸಿದ್ದಾರೆ. ಹೃದಯಾಘಾತದಿಂದ ಪುನೀತ್ ರಾಜ್ಕುಮಾರ್ ಅಕ್ಟೋಬರ್ 29 ರಂದು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ತಾನು ಹೊರುವುದಾಗಿ ತಮಿಳು ನಟ ಹೇಳಿದ್ದಾರೆ.