ನನಗೆ ರಾಜಕೀಯಕ್ಕೆ ಬರಲು ಸತಾರಾಂ ಇಷ್ಟವಿಲ್ಲ ಎಂದು ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವ ವರದಿಗಳು ಚಿತ್ರರಂಗ, ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದವು.
ಉಹಾಪೋಹಗಳಿಗೆ ತೆರೆಎಳೆದ ಅವರು, ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ನಮ್ಮ ಮನೆಗೆ ಬಂದಿರುವುದು ಗೌರವಿಸುತ್ತೇನೆ. ಆದರೆ, ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡುವುದಿಲ್ಲ. ದಯವಿಟ್ಟು ಉಹಾಪೋಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.
ಪತ್ನಿ ಗೀತಾ ರಾಜಕೀಯದಲ್ಲಿ ಮುಂದುವರಿಯಲಿದ್ದಾರೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವರಾಜ್ ಕುಮಾರ್, ಅದು ಅವರ ವಿವೇಚನೆಗೆ ಬಿಟ್ಟಿದ್ದು ಎಂದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.