ಹೈದರಾಬಾದ್ : ಟಾಲಿವುಡ್ ನಟ ಪ್ರಭಾಸ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಸೇರಿ ಸಲಾರ್ ಎಂಬ ಆಕ್ಷನ್ ಎಂಟರ್ ಟೈನರ್ ಚಿತ್ರವನ್ನು ಮಾಡುತ್ತಿದ್ದಾರೆ. ಈ ಚಿತ್ರವನ್ನು ವಿಜಯ್ ಕಿರಗಂಡೂರ್ ಅವರು ಭಾರೀ ಬಜೆಟ್ ನಲ್ಲಿ ನಿರ್ಮಿಸುತ್ತಿದ್ದಾರೆ.
ಆದರೆ ಸಲಾರ್ ಚಿತ್ರದಲ್ಲಿ ಪ್ರಭಾಸ್ ಫಸ್ಟ್ ಲುಕ್ ನೋಡಿದ ಪ್ರೇಕ್ಷಕರು ಇದು ಪ್ರಶಾಂತ್ ನೀಲ್ ಅವರ ಉಗ್ರಂ ನ ರಿಮೇಕ್ ಆಗಿರಬಹುದೆಂದು ಚರ್ಚಿಸುತ್ತಿದ್ದಾರೆ. ಆದರೆ ನಿರ್ದೇಶಕ ಪ್ರಶಾಂತ್ ನೀಲ್ ಇದು ಯಾವುದೇ ಚಿತ್ರದ ರಿಮೇಕ್ ಅಲ್ಲ ಎಂದು ಹೇಳಿದ್ದಾರೆ. ಆದರೆ ಇತ್ತೀಚೆಗೆ ಸಲಾರ್ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರ ಹೇಳಿಕೆ ಮತ್ತೆ ಪ್ರೇಕ್ಷಕರಲ್ಲಿ ಗೊಂದಲ ಸೃಷ್ಟಿಸಿದೆ ಎನ್ನಲಾಗಿದೆ.