Webdunia - Bharat's app for daily news and videos

Install App

ಮೋಹಿನಿಯಾಟ್ಟಂ ಕಲಾವಿದೆಗೆ ಅವಮಾನ: ಜಡ್ಜ್ ಕಲಂ ಪಾಷಾ ವಿರುದ್ಧ ಆಕ್ರೋಶ

Webdunia
ಗುರುವಾರ, 24 ಮಾರ್ಚ್ 2022 (10:09 IST)
ಪಾಲಕ್ಕಾಡ್: ಮೋಹಿನಿಯಾಟ್ಟಂ ಎನ್ನುವುದು ನಮ್ಮ ಸಾಂಪ್ರದಾಯಿಕ ನೃತ್ಯ ಶೈಲಿಯಲ್ಲಿ ಒಂದು. ಈ ನೃತ್ಯಕ್ಕೆ ಅದರದ್ದೇ ಆದ ಪರಂಪರೆಯಿದೆ. ಆದರೆ ಮೋಹಿನಿಯಾಟ್ಟಂ ಕಾರ್ಯಕ್ರಮವನ್ನು ಅರ್ಧಕ್ಕೇ ನಿಲ್ಲಿಸಿದ ಕೇರಳದ ಪಾಲಕ್ಕಾಡ್ ನ ಜಿಲ್ಲಾ ನ್ಯಾಯಾಧೀಶ ಕಲಂ ಪಾಷಾ ವಿರುದ್ಧ ಈಗ ಆಕ್ರೋಶ ವ್ಯಕ್ತವಾಗಿದೆ.

ಪಾಲಕ್ಕಾಡ್ ನ ಸರ್ಕಾರಿ ಶಾಲೆಯೊಂದರಲ್ಲಿ ಖ್ಯಾತ ಕಲಾವಿದೆ ಡಾ.ನೀನಾ ಪ್ರಸಾದ್ ಮತ್ತು ತಂಡದವರಿಂದ ಮೋಹಿನಿಯಾಟ್ಟಂ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆಯ ಸಮೀಪವೇ ಜಡ್ಜ್‍ ಕಲಂ ಪಾಷಾ ನಿವಾಸವಿದೆ.

ಆದರೆ ಈ ನೃತ್ಯ ಕಾರ್ಯಕ್ರಮದ ಧ್ವನಿ ವರ್ಧಕದಿಂದಾಗಿ ನಿದ್ದೆ ಮಾಡಲಾಗುತ್ತಿಲ್ಲ. ಕಿರಿ ಕಿರಿಯಾಗುತ್ತಿದೆ ಎಂದು ತಮ್ಮ ಅಧಿಕಾರ ಬಳಸಿ ಪೊಲೀಸರನ್ನು ಕಳುಹಿಸಿ ಕಾರ್ಯಕ್ರಮವನ್ನು ಮೊಟಕುಗೊಳಿಸಲಾಯಿತು. ಇದರಿಂದಾಗಿ ಕಲಾವಿದೆ ನೀನಾ ಪ್ರಸಾದ್ ಮತ್ತು ಬಳಗ ಕಣ್ಣೀರಿಡುತ್ತಾ ವೇದಿಕೆಯಿಂದ ಹೊರನಡೆದಿತ್ತು. ಈ ಬಗ್ಗೆ ನೀನಾ ಪ್ರಸಾದ್ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಅವರ ಹೇಳಿಕೆಯ ನಂತರ ನೆಟ್ಟಿಗರು ಜಡ್ಜ್ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments