ಚೆನ್ನೈ: ರಾಜಕೀಯಕ್ಕೆ ಎಂಟ್ರಿಕೊಡಲು ತಯಾರಿ ನಡೆಸುತ್ತಿರುವ ಬಹುಭಾಷಾ ನಟ ಕಮಲ್ ಹಾಸನ್ ಗೆ ಇಂದು 63 ನೇ ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ ಕಮಲ್ ಬಗ್ಗೆ ಭಾರೀ ನಿರೀಕ್ಷೆ ಹೊತ್ತಿದ್ದ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ಯಾವುದೇ ಕಾರಣಕ್ಕೂ ಇಂದು ತಮ್ಮ ಬರ್ತ್ ಡೇ ಸೆಲೆಬ್ರೇಷನ್ ಮಾಡಿಕೊಳ್ಳಲ್ಲ ಎಂದು ಕಮಲ್ ಟ್ವೀಟ್ ಮಾಡಿದ್ದಾರೆ. ಆದರೆ ಕಮಲ್ ಈ ಹಿಂದೆ ಹೇಳಿದಂತೆ ತಮ್ಮ ಮೊಬೈಲ್ ಆಪ್ ನ್ನು ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ.
ಅದ್ಧೂರಿಯಾಗಿ ಬರ್ತ್ ಡೇ ಆಚರಿಸಿಕೊಳ್ಳುವ ಬದಲು ತಮ್ಮ ಅಭಿಮಾನಿಗಳು ಆಯೋಜಿಸಿರುವ ವೈದ್ಯಕೀಯ ಕ್ಯಾಂಪ್ ಗೆ ಭೇಟಿ ಕೊಡಲಿದ್ದಾರೆ ಎಂದು ಅವರ ವಕ್ತಾರರು ಹೇಳಿದ್ದಾರೆ. ಈ ಮೂಲಕ ಅವರ ಬರ್ತ್ ಡೇಯನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳಲು ಹೊರಟಿದ್ದ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ