ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು, ಸದ್ಯಕ್ಕೆ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ನೇಹಿತನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ನಿನ್ನೆ ರಾತ್ರಿ ಅಪಘಾತವಾಗಿದೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆದುಳು ಮತ್ತು ತೊಡೆ ಭಾಗಕ್ಕೆ ತೀವ್ರ ಪೆಟ್ಟಾಗಿದೆ ಎನ್ನಲಾಗಿದೆ.
ಆಸ್ಪತ್ರೆಗೆ ಭೇಟಿ ನೀಡಿದ ನಟ ನೀನಾಸಂ ಸತೀಶ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಸದ್ಯಕ್ಕೆ ಸಂಚಾರಿ ವಿಜಯ್ ಪ್ರಾಣಕ್ಕೆ ಅಪಾಯವಿಲ್ಲ. ಆರಾಮವಾಗಿದ್ದಾರೆ. ಯಾರೂ ಸುಳ್ಳು ಮಾಹಿತಿ ಕೊಡಬೇಡಿ. ಒಂದು ಆಕ್ಸಿಡೆಂಟ್ ಆಗಿದೆ. ಮಾತಾಡುವ ಸ್ಥಿತಿಯಲ್ಲಿಲ್ಲ. ಆದರೆ ಸುಧಾರಿಸಿಕೊಳ್ಳುತ್ತಿದ್ದಾರೆ. ಬೇಗನೇ ಚೇತರಿಸಿಕೊಳ್ಳುತ್ತಾರೆ ಎಂದಿದ್ದಾರೆ.