ಚೆನ್ನೈ : ನಟಿ ಕಸ್ತೂರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಸಕ್ರಿಯರಾಗಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಪೋಸ್ಟ್, ಕಾಮೆಂಟ್ ಮಾಡುತ್ತಿರುತ್ತಾರೆ.
ಅಲ್ಲದೇ ಇತ್ತೀಚೆಗೆ ನಟಿ ವನಿತಾ ಅವರ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವುದರ ಮೂಲಕ ಅವರು ಕೋಲಾಹಲ ಸೃಷ್ಟಿಸಿದ್ದರು. ಇದೀಗ ಅವರು ರಾಜಕೀಯದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ತಮಿಳುನಾಡಿನ ಎರಡು ಪ್ರಮುಖ ಪಕ್ಷಗಳಿಂದ ಅವರು ಕರೆಗಳನ್ನು ಸ್ವೀಕರಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಅವರು ಯಾವ ಪಕ್ಷಕ್ಕೆ ಸೇರುತ್ತಾರೆ ಎಂಬುದನ್ನು 20ದಿನಗಳಲ್ಲಿ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.