ಬೆಂಗಳೂರು: ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಗೆ ಅದೆಷ್ಟೋ ಅಭಿಮಾನಿಗಳಿದ್ದಾರೆ. ಆದರೆ ಈತ ಅಭಿಮಾನಿ ಸಂಘದ ಅಧ್ಯಕ್ಷನಾಗಿದ್ದುಕೊಂಡು ಯುವತಿಯರಿಗೆ ಮೋಸ ಮಾಡುತ್ತಿದ್ದಾನೆ ಎಂಬ ಆರೋಪಗಳು ಕೇಳಿ ಬಂದಿದೆ.
ಸುದೀಪ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಪುನೀತ್ ಆರ್ಯ ಎಂಬಾತ ಕಿಚ್ಚನ ಹೆಸರು ಬಳಸಿಕೊಂಡು ಅಡ್ಡದಾರಿ ಹಿಡಿದಿದ್ದಾನೆ. ಸಿನಿಮಾದಲ್ಲಿ ಛಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆಂದು ಖಾಸಗಿ ವಾಹಿನಿಯಲ್ಲಿ ವರದಿಯಾಗಿದೆ.
ನತದೃಷ್ಟ ಯುವತಿ ಬಹಿರಂಗವಾಗಿ ಹೇಳಿಕೊಂಡ ನಂತರ ಈತನ ಬಗ್ಗೆ ಮತ್ತಷ್ಟು ಇಂತಹ ಪ್ರಕರಣಗಳು ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿ ತುಮಕೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಸದ್ಯಕ್ಕೆ ಬಂಧನ ಭೀತಿಯಲ್ಲಿರುವ ಈತ ಮಾತ್ರ ಆರೋಪಗಳೆಲ್ಲಾ ಸುಳ್ಳು ಎನ್ನುತ್ತಿದ್ದಾನೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ