ಬೆಂಗಳೂರು: ಪುನೀತ್ ರಾಜ್ ಕುಮಾರ್ ಜೀವನ ಕುರಿತಾದ ನೀನೇ ರಾಜಕುಮಾರ ಪುಸ್ತಕವನ್ನು ಕಿಚ್ಚ ಸುದೀಪ್ ಲೋಕಾರ್ಪಣೆಗೊಳಿಸಿದ್ದಾರೆ.
ಡಾ. ಶರಣು ಹುಲ್ಲೂರು ಬರೆದಿರುವ ಈ ಪುಸ್ತಕದಲ್ಲಿ ಪುನೀತ್ ರಾಜ್ ಕುಮಾರ್ ಜೀವನದ ಕುರಿತು ಸೊಗಸಾಗಿ ಬರೆಯಲಾಗಿದೆ. ಈ ಪುಸ್ತಕವನ್ನು ಬಿಡುಗಡೆ ಮಾಡಿ ಕಿಚ್ಚ ಸುದೀಪ್ ಸ್ನೇಹಿತ ಪುನೀತ್ ಬಗ್ಗೆ ಪ್ರೀತಿಯಿಂದ ಮಾತನಾಡಿದ್ದಾರೆ.
ಒಂದೊಳ್ಳೆ ಕೃತಿ ಮೂಲಕ ಡಾ. ಶರಣು ಹುಲ್ಲೂರು ಅಪ್ಪುಗೆ ನಮನ ಸಲ್ಲಿಸಿದ್ದಾರೆ. ಪುನೀತ್ ಅವರದ್ದು ಪುಸ್ತಕವಾಗುವಂತಹ ವ್ಯಕ್ತಿತ್ವ. ಯಾವತ್ತಿಗೂ ಪುನೀತ್ ಅವರನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ ಎಂದು ಸುದೀಪ್ ಭಾವುಕರಾಗಿ ಹೇಳಿದ್ದಾರೆ.