Publish Date: Wed, 15 Sep 2021 (11:20 IST)
Updated Date: Wed, 15 Sep 2021 (10:22 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ನಟಿಸುತ್ತಿರುವ ಲವ್ ಮಾಕ್ಟೇಲ್ 2 ಸಿನಿಮಾದ ಮೂರನೇ ಹಾಡು ಬಿಡುಗಡೆಗೆ ಸಿದ್ಧವಾಗಿದೆ.
ಈಗಾಗಲೇ ಎರಡು ಹಾಡುಗಳು ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಕಂಡಿತ್ತು. ಈಗ ಇದೇ ಸ್ವರ್ಗ ಎಂದು ಆರಂಭವಾಗುವ ಹಾಡೊಂದನ್ನು ಸೆಪ್ಟೆಂಬರ್ 17 ರಂದು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧವಾಗಿದೆ.
ನಕುಲ್ ಅಭಯಂಕರ್ ಸಂಗೀತ ಸಂಯೋಜಿಸಿರುವ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಝೇಂಕಾರ್ ಮ್ಯೂಸಿಕ್ ಯೂ ಟ್ಯೂಬ್ ಚಾನೆಲ್ ನಲ್ಲಿ ಹಾಡು ರಿಲೀಸ್ ಆಗಲಿದೆ.