ನಟ ಸಾರ್ವಭೌಮ ಡಾ.ರಾಜಕುಮಾರ್ ಪತ್ನಿ ಪಾರ್ವತಮ್ಮ ಅಂತಿಮ ಯಾತ್ರೆ ಸಂದರ್ಭದಲ್ಲಿ ರಾಷ್ಟ್ರಧ್ವಜ ಬಳಕೆ ಮಾಡಿರುವುದು ಕಾನೂನುಬಾಹಿರವಾಗಿದೆ ಎಂದು ಬೆಂಗಳೂರಿನ ವಿಜಯನಗರ ನಿವಾಸಿ ವಕೀಲ ಚೇತನ್ ಎನ್ನುವವರು ಖಾಸಗಿ ದೂರು ಸಲ್ಲಿಸಿದ್ದಾರೆ.
ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಆರೋಪಿಗಳಾಗಿಸಿದ್ದಾರೆ
ಖಾಸಗಿ ವ್ಯಕ್ತಿಗಳ ಮೇಲೆ ರಾಷ್ಟ್ರಧ್ವಜ ಬಳಕೆ ಮಾಡಿರುವುದರಿಂದ ರಾಷ್ಟ್ರಧ್ವಜ ಕಾಯ್ದೆ ನಿಯಮ 5 ರ ಉಲ್ಲಂಘನೆ ಎಂದು ವಕೀಲ ಚೇತನ್ ಎನ್ನುವವರು ಖಾಸಗಿ ದೂರು ದಾಖಲಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.