ಚೆನ್ನೈ: ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿರುವ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಜೋಡಿ ಈಗ ಮದುವೆ ತಯಾರಿಯಲ್ಲಿದೆ.
ಇಬ್ಬರೂ ಜೂನ್ 9 ರಂದು ಅದ್ಧೂರಿಯಾಗಿ ಮದುವೆಯಾಗಲಿದ್ದಾರೆ ಎಂಬ ಸುದ್ದಿಯಿದೆ. ಈ ಹಿನ್ನಲೆಯಲ್ಲಿ ನಯನತಾರಾ ಮತ್ತು ವಿಘ್ನೇಶ್ ಜೋಡಿ ತಮಿಳುನಾಡು ಸಿಎಂ ಸ್ಟಾಲಿನ್ ಅವರನ್ನು ಭೇಟಿಯಾಗಿ ಮದುವೆಗೆ ಆಹ್ವಾನವನ್ನೂ ನೀಡಿದೆ.
ಇನ್ನು, ನಯನತಾರಾ-ವಿಘ್ನೇಶ್ ಮದುವೆಯನ್ನು ಅಭಿಮಾನಿಗಳೂ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಹೀಗಾಗಿ ಇದರ ಲಾಭ ಪಡೆದುಕೊಳ್ಳಲು ಒಟಿಟಿ ಸಂಸ್ಥೆಗಳಿಂದ ನೇರಪ್ರಸಾರದ ಹಕ್ಕಿಗಾಗಿ ಭಾರೀ ಬೇಡಿಕೆ ಬಂದಿದೆ ಎನ್ನಲಾಗಿದೆ.