Webdunia - Bharat's app for daily news and videos

Install App

ನಯನತಾರಾ ದಾಂಪತ್ಯದಲ್ಲಿ ಬಿರುಕು ರೂಮರ್: ಮುಂದೆ ಆಗಿದ್ದೇ ಬೇರೆ

Krishnaveni K
ಶನಿವಾರ, 2 ಮಾರ್ಚ್ 2024 (20:43 IST)
Photo Courtesy: Twitter
ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಮತ್ತು ಪತಿ ವಿಘ‍್ನೇಶ್ ಶಿವನ್ ನಡುವೆ ಎಲ್ಲವೂ ಸರಿಯಿಲ್ಲ, ದಂಪತಿ ಸದ್ಯದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂಬ ಗಾಸಿಪ್ ಇಂದು ಹುಟ್ಟಿಕೊಂಡಿತ್ತು. ಆದರೆ ನಂತರ ಆಗಿದ್ದೇ ಬೇರೆ.

ನಯನತಾರಾ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ವಿಘ‍್ನೇಶ್ ಶಿವನ್ ಅವರನ್ನು ಅನ್ ಫಾಲೋ ಮಾಡಿದರು. ಬಳಿಕ ಬೇಸರದ ಸಂದೇಶವೊಂದನ್ನು ಬರೆದುಕೊಂಡರು. ಇದನ್ನು ನೋಡಿ ನಯನತಾರಾ ಮತ್ತು ವಿಘ‍್ನೇಶ್ ನಡುವೆ ಎಲ್ಲವೂ ಸರಿಯಿಲ್ಲ ಎಂದು ಎಲ್ಲಾ ಕಡೆ ಸುದ್ದಿ ಹಬ್ಬಲಾರಂಭಿಸಿತು.

ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ನಯನತಾರಾ ಮತ್ತೆ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ವಿಘ‍್ನೇಶ್ ಶಿವನ್ ಅವರನ್ನು ಫಾಲೋ ಮಾಡಿದ್ದಾರೆ. ಅತ್ತ ವಿಘ‍್ನೇಶ್ ಕೂಡಾ ನಯನತಾರಾ ಫೋಟೋ ಸಮೇತ ಜಾಹೀರಾತೊಂದರ ಫೋಟೋ ಪ್ರಕಟಿಸುವ ಮೂಲಕ ಗಾಸಿಪ್ ಗಳಿಗೆ ತೆರೆ ಎಳೆಯುವ ಪ್ರಯತ್ನ ನಡೆಸಿದರು.

20222 ರಲ್ಲಿ ಈ ಜೋಡಿ ಬಹುಕಾಲ ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲವೇ ತಿಂಗಳಲ್ಲಿ ಬಾಡಿಗೆ ತಾಯ್ತನದ ಮೂಲಕ ಇಬ್ಬರು ಅವಳಿ ಮಕ್ಕಳನ್ನು ಪಡೆದಿದ್ದಾರೆ. ಮದುವೆ ಬಳಿಕ ನಯನತಾರಾ ಬಾಲಿವುಡ್ ನಲ್ಲಿ ಶಾರುಖ್ ಖಾನ್ ಜೊತೆ ಸಿನಿಮಾ ಮಾಡಿದ್ದರು. ಇದರ ನಡುವೆಯೇ ಅವರ ಸಂಬಂಧದ ಬಗ್ಗೆ ಇಂತಹದ್ದೊಂದು ಗಾಸಿಪ್ ಕೇಳಿಬಂದಿದ್ದು ನಿಜಕ್ಕೂ ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments