ಬೆಂಗಳೂರು: ಇಂದು ಬೆಳಿಗ್ಗೆ ವಿಧಿವಶರಾದ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅಂತಿಮ ಸಂಸ್ಕಾರವನ್ನು ಕಂಠೀರವ ಸ್ಟುಡಿಯೋದಲ್ಲಿ ವರನಟ ರಾಜ್ ಕುಮಾರ್ ಸಮಾಧಿ ಪಕ್ಕ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸಾರ್ವಜನಿಕ ದರ್ಶನದ ನಂತರ ಇಂದು ಸಂಜೆ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ನಡೆಸಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ಕುಟುಂಬ ವರ್ಗ ತಿಳಿಸಿದೆ.
ಬೆಳಿಗ್ಗೆ 11 ಗಂಟೆಯಿಂದ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಸಕಲ ತಯಾರಿ ನಡೆಸಲಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತು ಒದಗಿಸಲಾಗಿದೆ. ಚಿತ್ರರಂಗದ, ರಾಜಕೀಯದ ಅನೇಕ ಗಣ್ಯರು ಈ ಸಂದರ್ಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ