Webdunia - Bharat's app for daily news and videos

Install App

ಅಣ್ಣಾವ್ರ 'ಗಂಧದಗುಡಿ‘ ಸಿನಿಮಾ ಸ್ಟೋರಿ ನಿಜ ಜೀವನದಲ್ಲಿ ಆಗಲಿ ಎಂದಾ ಪವನ್ ಕಲ್ಯಾಣ್

Sampriya
ಗುರುವಾರ, 8 ಆಗಸ್ಟ್ 2024 (20:54 IST)
ಬೆಂಗಳೂರು: ಅರಣ್ಯ ಇಲಾಖೆ ಕುರಿತಾದ ಸಭೆಗೆ ಇಂದು ಕರ್ನಾಟಕಕ್ಕೆ ಆಗಮಿಸಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅವರು ಈ ಸಂದರ್ಭದಲ್ಲಿ ಡಾ.ರಾಜ್‌ಕುಮಾರ್ ಅವರ ಸಿನಿಮಾವನ್ನು ಸ್ಮರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಭೇಟಿ ನಂತರ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅಣ್ಣಾವ್ರ ಗಂಧದ ಗುಡಿ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ನಾನು ಈ ಸಿನಿಮಾವನ್ನು ನೋಡಿದ್ದೇನೆ. ನನಗೆ ಕನ್ನಡ ಭಾಷೆ ಮೇಲೆ ತುಂಬಾನೇ ಪ್ರೀತಿಯಿದೆ ಹಾಗೂ ಗೌರವಿಸುತ್ತೇನೆ ಎಂದರು.

ರಾಜ್‌ಕುಮಾರ್ ಅವರ 'ಗಂಧದ ಗುಡಿ' ಚಿತ್ರದಲ್ಲಿ ಅರಣ್ಯ ರಕ್ಷಣೆ ಮತ್ತು ಶ್ರೀಗಂಧ ಉಳಿಸುವ ಪ್ರಯತ್ನ ತೋರಿಸಿದ್ದರು. ಆದರೆ ಈಗ ಗಂಧ ಕಳ್ಳತನ ಇರುವ ಸಿನಿಮಾ ಮಾಡುವಂತಾಗಿದೆ.  ಗಂಧದ ಗುಡಿ ಸಿನಿಮಾದಲ್ಲಿ ಅರಣ್ಯವನ್ನು ರಕ್ಷಿಸುವ ಬಗ್ಗೆ ಒಳ್ಳೆಯ ಸಂದೇಶವನ್ನು ಸಾರಿದ್ದಾರೆ. ಇದು ನಿಜ ಜೀವನದಲ್ಲೂ ಆಗಬೇಕಿದೆ.

ಆಂಧ್ರ ಹಾಗೂ ಕರ್ನಾಟಕದ ಜತೆ ಉತ್ತಮ ಸಂಬಂಧ ಇದ್ದು, ಇಂದಿನ ಸಭೆಯಲ್ಲಿ ಏಳು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅದರಲ್ಲಿ ರಕ್ತಚಂದನ ರಕ್ಷಣೆ, ಪುಂಡಾನೆ ಸೆರೆಹಿಡಿಯೋದು, ಅರಣ್ಯ ರಕ್ಷಣೆ ಸೇರಿದಂತೆ ಏಳು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಪವನ್ ಕಲ್ಯಾಣ್ ಅವರು ವಿವರಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments