Publish Date: Fri, 13 Nov 2020 (09:27 IST)
Updated Date: Fri, 13 Nov 2020 (09:29 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಸಿನಿಮಾ ಚಿತ್ರೀಕರಣ ಕೊನೆಯ ಹಂತ ತಲುಪಿದೆ. ಇದರ ಬಗ್ಗೆ ಸ್ವತಃ ಕಿಚ್ಚ ಸುದೀಪ್ ಮಾಹಿತಿ ನೀಡಿದ್ದಾರೆ.
ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್ ಸಿನಿಮಾವನ್ನು ಹೈದರಾಬಾದ್ ನಲ್ಲಿ ವಿಶೇಷ ಸೆಟ್ ನಲ್ಲಿ ಚಿತ್ರೀಕರಿಸಲಾಗುತ್ತಿತ್ತು. ಲಾಕ್ ಡೌನ್ ಮುಗಿದ ಬಳಿಕ ಸುದೀಪ್ ಪಾಲ್ಗೊಂಡ ಮೊದಲ ಸಿನಿಮಾ ಚಿತ್ರೀಕರಣವಿದು. ಇದೀಗ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ ಎಂದು ಸುದೀಪ್ ಮಾಹಿತಿ ನೀಡಿದ್ದಾರೆ.