Publish Date: Thu, 10 Dec 2020 (09:18 IST)
Updated Date: Thu, 10 Dec 2020 (09:20 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಸಿನಿಮಾ ಅಂತಿಮ ಹಂತಕ್ಕೆ ಬಂದು ತಲುಪಿದೆ. ಈ ವಿಚಾರವನ್ನು ಸ್ವತಃ ಕಿಚ್ಚ ಹೇಳಿದ್ದಾರೆ.
ಫ್ಯಾಂಟಮ್ ಮೊದಲ ಹಂತದ ಚಿತ್ರೀಕರಣ ಹೈದರಾಬಾದ್ ನಲ್ಲಿ ವಿಶೇಷ ಸೆಟ್ ನಲ್ಲಿ ನಡೆದಿತ್ತು. ಇದೀಗ ಅಂತಿಮ ಹಂತದ ಚಿತ್ರೀಕರಣ ಕೇರಳದಲ್ಲಿ ನಡೆಯುತ್ತಿದೆ. ಇಲ್ಲೂ ವಿಶೇಷ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ಈ ಸಿನಿಮಾ ಮುಂದಿನ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು.