ಬೆಂಗಳೂರು : ಫ್ಲೆಕ್ಸ್ ನಿಷೇಧದಿಂದ ಸಿನಿಮಾ ಪ್ರಚಾರಕ್ಕೆ ಅಡ್ಡಿಯಾಗುತ್ತಿರುವ ಹಿನ್ನಲೆಯಲ್ಲಿ ಸಿನಮಾ ಪೋಸ್ಟರ್ ಗಳನ್ನು ಅಂಟಿಸುವ ಅವಕಾಶ ನೀಡಬೇಕೆಂದು ನಟ ಶಿವರಾಜ್ ಕುಮಾರ್ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಗುರುವಾರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಚಿನ್ನೇಗೌಡ ಅವರ ಜೊತೆ ವಿಧಾನಸೌದದಲ್ಲಿ ಸಿಎಂ ಅನ್ನು ಭೇಟಿ ಮಾಡಿದ ಶಿವರಾಜ್ ಕುಮಾರ್ ಅವರು ಫ್ಲೆಕ್ಸ್ ನಿಷೇಧದಿಂದ ಸಿನಿಮಾ ಪ್ರಚಾರಕ್ಕೆ ತೊಂದರೆಯಾಗುತ್ತಿರುವ ಕಾರಣ ಪೋಸ್ಟರ್ ಮೂಲಕ ಸಿನಿಮಾ ಪ್ರಚಾರಕ್ಕೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಇದಕ್ಕೆ ಸಿಎಂ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ನಟ ಶಿವರಾಜ್ ಕುಮಾರ್ ಅವರೇ ಮಾಧ್ಯಮಕ್ಕೆ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.